ಜು.30ರಂದು ಶ್ರೀ ಯದುಗಿರಿ ಯತಿರಾಜ ಶ್ರೀಗಳಿಗೆ ತುಮಕೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ. ಬೆಂಗಳೂರು,ಜುಲೈ,26,2022(..):ಮಲ್ಲೇಶ್ವರಂನಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠದ ಸ್ವಾಮೀಜಿ ಶ್ರೀ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಅವರಿಗೆ ಇದೇ 30ರಂದು ತುಮಕೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದೆ. ಇದರ ಅಂಗವಾಗಿ ನಗರದ ಚೌಡಯ್ಯ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ವಿಶೇಷ ಸಮಾರಂಭ ಏರ್ಪಡಿಸಲಾಗಿದೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವರೂ ಸಮ ಕುಲಾಧಿಪತಿಗಳೂ ಆದ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜತೆಗೆ, ಕುಲಪತಿ ಪ್ರೊ.ವೆಂಕಟೇಶ್ವರಲು ಮತ್ತು ಕುಲಸಚಿವ ಪ್ರೊ.ನಿರ್ಮಲ್ ರಾಜು ಕೂಡ ಸಮಾರಂಭದಲ್ಲಿ ಇರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. : 30- – – .