ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ: 20,279 ಮಂದಿಗೆ ಸೋಂಕು ದೃಢ ಬೆಂಗಳೂರು, ಜುಲೈ 24, 2022 (..):ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಯಲ್ಲಿ 20,279 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 36 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 526033 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾ ಸೋಂಕಿನಿಂದ 18143 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.