ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, ಸಕ್ರಿಯ ರಾಜಕೀಯದಿಂದ ನಿವೃತ್ತಿ ಇಲ್ಲ: ಮಾಜಿ ಸಿಎಂ ಬಿಎಸ್ವೈ ಸ್ಪಷ್ಟನೆ ಬೆಂಗಳೂರು, ಜುಲೈ 24, 2022 (..):ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶಿಕಾರಿಪುರದಲ್ಲಿ ನನ್ನ ಬದಲಿಗೆ ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ ಎಂದು ಸಲಹೆ ನೀಡಿದೆ ಅಷ್ಟೇ. ಅಂತಿಮವಾಗಿ ತೀರ್ಮಾನ ಹೈಕಮಾಂಡ್ ಮಾಡುತ್ತೆ ಎಂದು ತಿಳಿಸಿದ್ದಾರೆ. ಅಂದಹಾಗೆ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರೂ ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಗೊಂದಲ ಸ್ಪಷ್ಟಪಡಿಸಲು ಹೇಳಿಕೆ ನೀಡಿದರು. ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡೋದಿಲ್ಲ. ಆದ್ರೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಪಡೆಯೋದಿಲ್ಲ ಎಂಬ ಯಡಿಯೂರಪ್ಪ ಸ್ಪಷ್ಟನೆಯಿಂದ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.