ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಖಚಿತ: ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್ ವೈ. ಶಿವಮೊಗ್ಗ,ಜುಲೈ,22,2022(..):ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪುತ್ರ ಬಿವೈ ವಿಜಯೇಂದ್ರ ಅವರಿಗಾಗಿ ಶಿಕಾರಿಪುರ ಕ್ಷೇತ್ರವನ್ನ ಬಿಟ್ಟುಕೊಟ್ಟಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ವಿಜಯೇಂದ್ರನಿಗೆ ಕೇತ್ರ ಬಿಟ್ಟು ಕೊಟ್ಟಿದ್ದೇನೆ. ನಾನು ಕ್ಷೇತ್ರ ಬಿಟ್ಟುಕೊಡುತ್ತಿದ್ದರಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ. ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲ್ಲ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ ಎಂದರು. ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ ಶಿಕಾರಿಪುರದಲ್ಲಿ ನನ್ನ ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಎಂದು ಬಿಎಸ್ ಯಡಿಯೂರಪ್ಪ ಮನವಿ ಮಾಡಿದರು. : - –-. .. : , 22, 2022 (..): .. .. . . “ . . , . ,” . .: .. / .. / /