ಪಿಎಸ್ ಐ ನೇಮಕಾತಿ ಹಗರಣ: ಐವರು ಆರೋಪಿಗಳ ಜಾಮೀನು ಅರ್ಜಿ ವಜಾ. ಬೆಂಗಳೂರು,ಜುಲೈ,22,2022(..):545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದ ಸಿಎನ್ ಶಶಿಧರ್, ದಿಲೀಪ್ ಕುಮಾರ್, ಸೂರ್ಯನಾರಾಯಣ, ರಘುವೀರ್ ಹಾಗೂ ನವೀನ್ ಪ್ರಸಾದ್ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಏಕಸದಸ್ಯ ಪೀಠ ಐವರ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ. : - –- – - -.