ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ. ಚಿತ್ರದುರ್ಗ,ಜುಲೈ,21,2022(..):ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗೊಲ್ಲರಹಟ್ಟಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.ಅಸ್ವಸ್ಥ ವಿದ್ಯಾರ್ಥಿಗಳಿಗೆ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. : - 40 - -