ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಾ ಎಂದು ಕರೆದಿಲ್ಲ: ಬಿಜೆಪಿಗೆ ಮಾತ್ರ ಹೋಗಬೇಡ ಎಂದಿದ್ದಾರೆ- ಶಾಸಕ ಜಿ.ಟಿ ದೇವೇಗೌಡ. ಮೈಸೂರು,ಜುಲೈ,21,2022(..):ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಾ ಎಂದು ಕರೆದಿಲ್ಲ. ಬಿಜೆಪಿಗೆ ಮಾತ್ರ ಹೋಗಬೇಡ ಅಂಥಾ ಹೇಳಿದ್ದಾರೆ. ಜೆಡಿಎಸ್ ನಲ್ಲೇ ಇರು ಅಂಥನೂ ಹೇಳಿಲ್ಲ. ಅವರು ಏನು ಹೇಳಿದ್ದಾರೆ ಅದನ್ನೇ ಈಗ ನಾನು ಬಹಿರಂಗವಾಗಿ ಹೇಳುತ್ತಿದ್ದೇನೆ ಎಂದು ಶಾಸಕ ಜಿ.ಟಿ ದೇವೇಗೌಡ ತಿಳಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಜಿಟಿ ದೇವೇಗೌಡರು, ನನ್ನ ನಿರ್ಧಾರ ಏನು ಎಂಬುದನ್ನು ಎರೆಡು ಮೂರು ತಿಂಗಳಲ್ಲಿ ತೀರ್ಮಾನ ಮಾಡುತ್ತೇನೆ. ಸಿದ್ದರಾಮಯ್ಯ ಕಳೆದ ಬಾರಿ ಸೋತಿರುವ ಕಾರಣ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವ ವಿಚಾರದಲ್ಲಿ ಅವರಿಗೆ ಆತಂಕ ಇದೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂಬ ಆಸೆ ಇದೆ. ಹೀಗಾಗಿ ಸೇಪ್ ಪ್ಲೇಸ್ ನೋಡ್ತಾ ಇದ್ದಾರೆ. ಅರ್ಜಿ ಹಾಕಿ ಗೆದ್ದು ಬರವಂತ ಕ್ಷೇತ್ರ ಹುಡುಕುತ್ತಿದ್ದಾರೆ. ಅವರು ಚುನಾವಣೆಯಲ್ಲಿ ರಾಜ್ಯ ಪ್ರವಾಸ ಮಾಡಬೇಕಿದೆ. ಇದಕ್ಕಾಗಿ ಅಳೆದು ತೂಗಿ ಲೆಕ್ಕ ಹಾಕುತ್ತಾರೆ ಎಂದರು. ಸಿದ್ದರಾಮಯ್ಯಗೆ ಸಾಫ್ಟ್ ಆಗಿಯೇ ತಿರುಗೇಟು ಕೊಟ್ಟ ಜಿ.ಟಿ ದೇವೇಗೌಡ. ಈಗಿನ ಚಾಮುಂಡೇಶ್ವರಿ ಶಾಸಕ ಏನು ಕಡೆದು ಕಟ್ಟೆ ಹಾಕಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ಸಾಫ್ಟ್ ಆಗಿಯೇ ತಿರುಗೇಟು ಕೊಟ್ಟ ಶಾಸಕ ಜಿ.ಟಿ ದೇವೇಗೌಡ, ಸಿದ್ದರಾಮಯ್ಯ ಶಾಸಕ, ಸಚಿವ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಎಲ್ಲಾ ಆದವರು. ನಾನು ಕೇವಲ‌ ಶಾಸಕ ಕೆಲವು ತಿಂಗಳ ಮಾತ್ರ ಮಂತ್ರಿಯಾಗಿದೆ. ನಾನು ಸಿದ್ದರಾಮಯ್ಯ ನವರಷ್ಟು ಕೆಲಸ ಮಾಡಲು ಸಾಧ್ಯನಾ. ನಾನು ಯಾವತ್ತು ನಾನೇ ಅಭಿವೃದ್ಧಿ ಮಾಡಿದ್ದೇನೆಂದು ಎಲ್ಲೂ ಹೇಳಿಲ್ಲ. ಸಿದ್ದರಾಮಯ್ಯ ಅಭಿವೃದ್ಧಿ ಮಾಡಿದ್ಧಾರೆ ಎಂದು ಕ್ರೆಡಿಟ್ ಕೊಟ್ಟಿದ್ದೇನೆ. ನಾನು ಏನು ಅಭಿವೃದ್ಧಿ ಕಾರ್ಯ ಮಾಡಿದ್ದೇನೆಂಬುದು ಕ್ಷೇತ್ರದ ಜನರಿಗೆ ಗೊತ್ತಿದೆ ಎಂದು ತಿಳಿಸಿದರು. ಒಕ್ಕಲಿಗರು ತಮ್ಮನ ಬೆಂಬಲಿಸಬೇಕು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಜಿ.ಟಿ ದೇವೇಗೌಡರು, ಜನರ ಮನಸ್ಥಿತಿ ಈಗ ತೀರ್ಮಾನವಾಗುವುದಿಲ್ಲ.ಅದಕ್ಕೆ ಇ‌ನ್ನೂ ಸಮಯಬೇಕು ಎಂದರು. : – -- . …. “ : – , 21, 2022 (..): “ . , . . ,” .. . , , “ - . , . . , . . . , .” , .. . “ , , . . ? . . ,” . .. ’ , .. , .: .. / /