ಗಾಂಧಿ ಕುಟುಂಬ ಅಂದ್ರೆ ಬಿಜೆಪಿಗೆ ಭಯ: ಸುಮ್ಮನೆ ಸುಳ್ಳು ಕೇಸ್ ಹಾಕಿ ಕಿರುಕುಳ ನೀಡುತ್ತಿದ್ದಾರೆ- ಡಿಕೆ ಶಿವಕುಮಾರ್ ವಾಗ್ದಾಳಿ. ಬೆಂಗಳೂರು,ಜುಲೈ,21,2022(..):ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕೈ ನಾಯಕರು, ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೇಂದ್ರ ಸರ್ಕಾರ ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಬಿಜೆಪಿಯವರಿಗೆ ಗಾಂಧಿ ಕುಟುಂಬ ಅಂದರೆ ಭಯ ಸುಮ್ಮನೆ ಸುಳ್ಳು ಕೇಸ್ ಹಾಕಿ ಕಿರುಕುಳ ನೀಡುತ್ತಿದ್ದಾರೆ. ರಾಹುಲ್ ಗಾಂಧಿಯನ್ನ 50 ಗಂಟೆಗಳ ಕಾಲ ವಿಚಾರಣೆ ಮಾಡಿದರು. ಇಡಿ ವಿಚಾರಣೆ ನಡೆಸಿರುವ ವಿಡಿಯೋ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. ನಮ್ಮ ನಾಯಕರ ಮೇಲೆ ಸುಳ್ಳು ಕೇಸ್ ಹಾಕಿ ತನಿಖೆ ನಡೆಸುತ್ತಿರುವುದನ್ನ ಖಂಡಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂಧ್ರ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. : - –- … : - , 21, 2022 (..): ’ , . . , .. . “ ’ . . 50 . ,” .“ . ,” .: ../ / / / / /