ಪ್ರಜ್ವಲ್ ರೇವಣ್ಣ ವಿರುದ್ಧ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಂಸದೆ ಮನೇಕಾ ಗಾಂಧಿ. ಹಾಸನ,ಜುಲೈ,19,2022(..):ಆನೆ ಹಂತಕರಿಗೆ ರಕ್ಷಣೆಗೆ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹೇರಿದ್ದಾರೆಂದು ಆರೋಪಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ. ಆನೆಯನ್ನು ಕೊಂದು ದಂತವನ್ನ ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿ ಸಂಸದೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ. ಆರೋಪಿಗಳು ಜಿಲ್ಲೆಯಲ್ಲಿ ಅಕ್ರಮವಾಗಿ ವಿದ್ಯುತ್ ಹರಿಸಿ ಸಲಗ ಕೊಂದು ಹೂತಿದ್ದರು. ಬಳಿಕ ಸತ್ತ ಆನೆಯಿಂದ ದಂತ ಕತ್ತರಿಸಿ ಮಾರಾಟ ಮಾಡಲು ಯತ್ನಿಸುವ ವೇಳೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಆದರೆ ಪ್ರಕರಣದ ಆರೋಪಿಗಳನ್ನ ರಕ್ಷಣೆ ಮಾಡುವಂತೆ ಪ್ರಜ್ವಲ್ ರೇವಣ್ಣ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ. ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಪ್ರಕರಣದಲ್ಲಿ ಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್ ಎಫ್ಓ ಪ್ರಯತ್ನ ಮಾಡಿದ್ದಾರೆ. ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಒತ್ತಡ ಹಾಕಿದ್ದಾರೆ. ಆರೋಪಿಗಳು ತಮ್ಮ ಪಾರ್ಟಿಯ ಬೆಂಬಲಿಗರು ಎನ್ನುವ ಕಾರಣಕ್ಕೆ ಅವರ ಪರವಾಗಿ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹಾಕುತ್ತಿದ್ದಾರೆ ಎಂದು ಮನೇಕಾ ಗಾಂಧಿ ದೂರು ನೀಡಿದ್ದಾರೆ. ಹಾಗೇ ತಕ್ಷಣ ಸಿಎಂ ಮಧ್ಯ ಪ್ರವೇಶಿಸಿ ನಿಷ್ಪಕ್ಷಪಾತ ರೀತಿಯಲ್ಲಿ ತನಿಕೆ ನಡೆಸಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. : - – – - - . … , 19, 2022 (..): . , .“ . , . - . . ,” . . - 19 .. . . , ’ . .: / / / /