ಇಂದು ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಪೊಲೀಸರಿಂದ ರೌಡಿಶೀಟರ್ ಮೇಲೆ ಫೈರಿಂಗ್ ಬೆಂಗಳೂರು, ಜುಲೈ 17, 2022 (..):ಇಂದು ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಪೊಲೀಸರು ರೌಡಿಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಹೌದು, ಮಂಗಳೂರು ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ನಗರದ ಅಸೈಗೋಳಿ ಬಳಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. 15ಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿರುವ ಮುಕ್ತಾರ್, ಪ್ರಕರಣವೊಂದರಲ್ಲಿ ಬಂಧಿಸಿ ಕಾರಿನ ಮಹಜರಿಗೆ ಹೋಗಿದ್ದ ವೇಳೆ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ರೌಡಿಶೀಟರ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಕಳೆದ ಐದು ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ. ಸದ್ಯ ಬಂಧಿಸಿದ್ದ ಪೊಲೀಸರು ಪ್ರಕರಣವೊಂದರ ಮಹಜರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪರಾರಿಯಾಗಲು ಯತ್ನಿಸಿದ್ದ.