ಯುವತಿ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ . ಬೆಂಗಳೂರು,ಜುಲೈ,16,2022(..):ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯ ನ್ಯೂ ಬೈಯ್ಯಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರಜ್ವಲ್ (18) ಕೊಲೆಯಾದ ಯುವಕ. ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – -