ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು. ಕಲಬುರಗಿ,ಜುಲೈ,16,2022(..):ಎರಡು ಬೈಕ್‌ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಮೃತಪಟ್ಟ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಚಿಂಚೊಳಿ ತಾಲ್ಲೂಕಿನ ಹೂವಿನಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ಶಿರೋಳ್ಳಿಯ ಜಗನ್ನಾಥ (42), ಮಹಿಬೂಬ್ ಅಲಿ (52) ಹಾಗೂ ಶಾದಿಪುರದ ಶ್ರೀಕಾಂತ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಮರ ಎಂಬಾತ‌ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುಲೇಪೇಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ. : -- –-