ಜುಲೈ 18ರಿಂದ ಸಂಸತ್ ಮುಂಗಾರು ಅಧಿವೇಶನ: ಅಸಂಸದೀಯ ಪದಗಳ ಪಟ್ಟಿ ಬಿಡುಗಡೆ. ನವದೆಹಲಿ,ಜುಲೈ,14,2022(..):ಸಂಸತ್ತಿನ ಈ ಬಾರಿಯ ಮುಂಗಾರು ಅಧಿವೇಶನ ಜುಲೈ 18 ರಿಂದ ಆರಂಭವಾಗಲಿದ್ದು, ಲೋಕಸಭೆಯ ಸೆಕ್ರೆಟರಿಯೇಟ್ ಅಸಂಸದೀಯ ಪದಗಳ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿರುವ ಅಸಂಸದೀಯ ಪದಗಳನ್ನ ಬಳಸಿದರೆ ಕಲಾಪದಿಂದ ಹೊರ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿರುವ ಪಟ್ಟಿಗಳಲ್ಲಿ ಜುಮ್ಲಜೀವಿ, ಬಾಲ್ ಬುದ್ಧಿ, ಕೊವಿಡ್ ಸ್ಪ್ರೆಡ್ಡರ್, ಸ್ನೂಪ್ಗೇಟ್, ಅರಾಜಕತಾವಾದಿ, ಶಕುನಿ, ಸರ್ವಾಧಿಕಾರಿ, ತಾನಶಾ, ತಾನಶಾಹಿ, ಜೈಚಂದ್, ವಿನಾಶ್ ಪುರುಷ, ಖಾಲಿಸ್ತಾನಿ, ಖೂನ್ ಸೆ ಖೇತಿ, ದೋಹ್ರಾ ಚರಿತ್ರ, ನಿಕಮ್ಮ, ನೌಟಂಕಿ, ದಿಂಡೋರಾ ಪೀಟ್ನಾ, ಬೆಹ್ರಿ ಸರ್ಕಾರ್ ಸೇರಿ ಹಲವು ಪದಗಳು ಸೇರಿದ್ದು ಈ ಪದಗಳನ್ನ ಅಧಿವೇಶನದಲ್ಲಿ ಬಳಸುವಂತಿಲ್ಲ. ಪಟ್ಟಿಯಲ್ಲಿರುವ ಅಸಂಸದೀಯ ಪದಗಳನ್ನ ಬಳಸಿದರೆ ಕಲಾಪದಿಂದ ಹೊರ ಹಾಕುವ ಎಚ್ಚರಿಕೆ ನೀಡಿದೆ. ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿರುವ ಪದಗಳನ್ನ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಬಳಸುವಂತಿಲ್ಲ. ಹೀಗೆ ಶಾಸಕಾಂಗ ಸಂಸ್ಥೆಗಳಲ್ಲಿ ಕಾಲಕಾಲಕ್ಕೆ ಕೆಲವು ಪದಗಳನ್ನ ಅಸಂಸದೀಯವೆಂದು ಘೋಷಣೆ ಮಾಡಲಾಗುತ್ತದೆ. ಮುಂಗಾರು ಅಧಿವೇಶನ ಜುಲೈ 18 ರಿಂದ ಆರಂಭವಾಗಿ ಆಗಸ್ಟ್ 12 ರಂದು ಕೊನೆಗೊಳ್ಳಲಿದೆ ಎಂದು ಲೋಕಸಭೆಯ ಸಚಿವಾಲಯ ಈಗಾಗಲೇ ತಿಳಿಸಿದೆ. : - - 18- – -- … 18: , 14, 2022 (..): 2022 18. . . , , , , , , , , , , , , , , , . . 18 12.: / /