ರಾಜ್ಯದಲ್ಲಿ ಮಳೆಯಿಂದಾಗಿ 32 ಮಂದಿ ಸಾವು: ಮೂರು ಜಿಲ್ಲೆಗಳಲ್ಲಿ 355 ಹೆಕ್ಟೇರ್ ಬೆಳೆ ನಾಶ- ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ. ಉಡುಪಿ,ಜುಲೈ,13,2022(..):ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಈವರೆಗೆ 32 ಮಂದಿ ಮೃತಪಟ್ಟಿದ್ದಾರೆ. ಐವರು ಕಾಣೆಯಾಗಿದ್ದು, 34 ಮಂದಿ ಗಾಯಗೊಂಡಿದ್ದಾರೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಉಡುಪಿಯಲ್ಲಿ ಅಧಿಕಾರಿಗಳ ಜತೆ ಸಭೆ ಬಳಿಕ ಮಾತನಾಡಿ ಮಳೆಹಾನಿ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಸಕ್ತ ವರ್ಷದಲ್ಲಿ ಜುಲೈ ತಿಂಗಳಿನಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ 300 ಮಂದಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ 355 ಹೆಕ್ಟರ್ ಬೆಳೆ ನಾಶವಾಗಿದ್ದು, 1,062 ಮನೆಗಳಿಗೆ ಹಾನಿಯಾಗಿದೆ. ರಾಜ್ಯದ ವಿವಿಧೆಡೆ 14 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ. 4 ರಾಷ್ಟ್ರೀಯ ವಿಪತ್ತು ರಕ್ಷಣಾ ತಂಡಗಳು, 4 ರಾಜ್ಯ ವಿಪತ್ತು ರಕ್ಷಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಜುಲೈ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 429, ಉತ್ತರ ಕನ್ನಡ 437 ಉಡುಪಿಯಲ್ಲಿ 296 ಮನೆಗ ಕುಸಿದಿವೆ. ಕರಾವಳಿಯಲ್ಲಿ 2187 ರಸ್ತೆಗಳು ಹಾನಿಗೊಳಗಾಗಿದ್ದು, 168 ಸೇತುವೆ ಹಾಳಾಗಿವೆ. ಮನೆ ಬಿದ್ದ ತಕ್ಷಣ 10 ಸಾವಿರ ಪರಿಹಾರಕ್ಕೆ ಸೂಚನೆ ನೀಡಲಾಗಿದೆ. ಮನೆ ಕುಸಿದರೆ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : 32 - – – - - … 32 : 355 – , 13, 2022 (..): . 32 , 34 . . “ . 300 . 355 , . 106 , 14 . 4 . ,” .“ 429 , 437 296 . 2187 168 . .10,000 . . 5 ,” .: / / / 32