ಜುಲೈ 19ರಂದು ದಸರಾ ಹೈಪರ್ ಕಮಿಟಿ ಮೀಟಿಂಗ್. ಮೈಸೂರು,ಜುಲೈ,12,2022(..):ಕೊರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಿದ್ದ ಸರ್ಕಾರ ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ಮುಂದಾಗಲಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ದಸರಾ ರೂಪುರೇಷೆ ಕುರಿತು ಚರ್ಚಿಸಲು ಜುಲೈ 19ರಂದು ದಸರಾ ಹೈಪರ್ ಕಮಿಟಿ ಮೀಟಿಂಗ್ ಕರೆಯಲಾಗಿದೆ. ಈ ಕುರಿತು ಮೈಸೂರಿನಲ್ಲಿ ಮಾಹಿತಿ ನೀಡಿದ ಸಚಿವ ಎಸ್.ಟಿ ಸೋಮಶೇಖರ್, ಜುಲೈ 19ರಂದು ದಸರಾ ಹೈಪರ್ ಕಮಿಟಿ ಮೀಟಿಂಗ್ ನಡೆಯಲಿದೆ. ಜುಲೈ 19ರ ಸಂಜೆ 4 ಗಂಟೆಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ ಆಯೋಜನೆ ಮಾಡಲಾಗಿದ್ದು, ಮೈಸೂರು ಭಾಗದ ಎಲ್ಲಾ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ದಸರಾ ರೂಪುರೇಷೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು. : - - - – 19th .