ಈ ಬಾರಿ ಲಾಲ್ ಬಾಗ್ ನಲ್ಲಿ ನಟ ದಿ. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ. ಬೆಂಗಳೂರು,ಜುಲೈ,12,2022(..):ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಹಲವು ತಿಂಗಳು ಕಳೆದಿದ್ದು ಅವರ ನೆನಪು ಅಭಿಮಾನಿಗಳ ಮನದಲ್ಲಿ ಇನ್ನೂ ಕಾಡುತ್ತಿದೆ. ಈ ಮಧ್ಯೆ ಈ ಬಾರಿ ಲಾಲ್ ಬಾಗ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ `ಫ್ಲವರ್ ಶೋ’ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ತೋಟಗಾರಿಕೆ ಸಚಿವ ಮುನಿರತ್ನ, ಲಾಲ್ ಬಾಗ್ ನ ಸಸ್ಯಶಾಸ್ತ್ರೀಯ ಉದ್ಯಾನದಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿದ್ದ ಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಫ್ಲವರ್ ಶೋವನ್ನ ನಟ ದಿ. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಆಯೋಜಿಸಲಾಗುವುದು ಎಂದಿದ್ದಾರೆ. ಈ ವರ್ಷ ಆಗಸ್ಟ್ 5 ರಿಂದ ಆಗಸ್ಟ್ 15 ರವರೆಗೆ ಫ್ಲವರ್ ಶೋ ನಡೆಯಲಿದೆ. ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟಿಸಲಿದ್ದು, ಈ ಬಾರಿಯ ಫ್ಲವರ್ ಶೋ ನಲ್ಲಿ ಡಾ. ರಾಜಕುಮಾರ್ ಅವರ ಗಾಜನೂರಿನ ಮನೆಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಅಲ್ಲದೆ ರಾಜ್ಯದಲ್ಲಿ ಕೊರೊನಾ ಏರಿಳಿತ ಕಂಡು ಬಂದಿದ್ದು ಈ ಹಿನ್ನೆಲೆಯಲ್ಲಿ ಫ್ಲವರ್ ಶೋ ವೇಳೆ ಕೋವಿಡ್ ನಿಯಮಗಳ ಪಾಲನೆಯು ಕಡ್ಡಾಯವಾಗಿರುತ್ತದೆ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ. ಇನ್ನು ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ಆಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಮುನಿರತ್ನ, ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ಸಂಪೂರ್ಣ ವರದಿ ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದು ಹೇಳಿದರು. : - – - … - ’ , 12, 2022 (..): ’ . , . ’ ’ . , ’ . . 5 15. . . . , . , .: / / /