ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ್ಧ ಚಂದ್ರ ಆರ್ಯ ಅವರು ಹುಟ್ಟೂರಿಗೆ ಭೇಟಿ. ತುಮಕೂರು,ಜುಲೈ,11,2022(..):ಇತ್ತೀಚಿಗಷ್ಟೇ ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತಾನಾಡಿ ಕನ್ನಡಿಗರೆಲ್ಲ ಹೆಮ್ಮೆಪಡುವಂತೆ ಮಾಡಿದ್ದ ಕೆನಡಾ ಸಂಸದ ಚಂದ್ರ’ ಆರ್ಯ ಅವರು ಇಂದು ತಮ್ಮ ಹುಟ್ಟೂರು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿರುವ ದ್ವಾರಾಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಚಂದ್ರ ಆರ್ಯ ಅವರು ಗಜ್ಜೆರಹಳ್ಳಿಯಲ್ಲಿರುವ ಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಸ್ನೇಹಿತರೊಂದಿಗೆ ಕೂತು ಚರ್ಚೆ ನಡೆಸಿದರು. ಚಂದ್ರ ಆರ್ಯ ಅವರನ್ನು ಗ್ರಾಮಸ್ಥರು ಹಾರ, ಪೇಟ ಹಾಕಿ ಸನ್ಮಾನಿಸಿದರು. ಇತ್ತೀಚೆಗೆ ಕೆನಡಾ ಸಂಸತ್ತಿನಲ್ಲಿ ಮಾತೃಭಾಷೆ ಕನ್ನಡವನ್ನು ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ತಮಗೆ ಕನ್ನಡದ ಮೇಲೆ ಇರುವ ಪ್ರೀತಿ, ಗೌರವ, ಅಭಿಮಾನವನ್ನು ವ್ಯಕ್ತಪಡಿಸಿದ್ದರು. ಚಂದ್ರ ಆರ್ಯ ಅವರು ಕನ್ನಡದಲ್ಲೇ ಮಾತನಾಡಿದ್ಧ ವಿಡಿಯೋ ಸಖತ್ ವೈರಲ್ ಆಗಿತ್ತು. : - – – - – .