ನಾಳೆಯಿಂದ ನಾಲ್ಕು ಜಿಲ್ಲೆಗಳಿಗೆ ಪ್ರವಾಸ: ಮಳೆಹಾನಿ ಪ್ರದೇಶಗಳ ಪರಿಶೀಲನೆ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಜುಲೈ,11,2022(..):ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಮಳೆಯಿಂದಾ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ನಾಳೆಯಿಂದ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ನಾಳೆಯಿಂದ ಎರಡು ದಿನಗಳ ಜಿಲ್ಲಾ ಪ್ರವಾಸ ಮಾಡುತ್ತೇವೆ. ನಾಳೆ ಕೊಡಗು ಉಡುಪಿ ಕಾರವಾರ ಜಿಲ್ಲೆಗೆ ಭೇಟಿ ನೀಡುತ್ತೇನೆ. ಕೊಡಗಿನಲ್ಲಿ ಮಳೆ ಹಾನಿ, ಭೂಕುಸಿತ ಪರಿಶೀಲನೆ ನಡೆಸುತ್ತೇನೆ. ಜೊತೆಗೆ ಮಳೆ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸುತ್ತೇವೆ. ಸಂತ್ರಸ್ತರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ. ಬಳಿಕ ಮಂಗಳೂರಿನಲ್ಲಿ ವಾಸ್ತವ್ಯ ಹೂಡಿ ನಾಡಿದ್ದು ಮಂಗಳೂರಿನಲ್ಲಿ ಉಡುಪಿ ಕಾರಾವಾರದಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : - - - – -