ಜನವರಿಯಿಂದ ಪಕ್ಷಾಂತರ ಪರ್ವ ಆರಂಭ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ. ಬೆಳಗಾವಿ,ಜುಲೈ,9,2022(..):ಉತ್ತರ ಕರ್ನಾಟಕದ ಪ್ರಭಾವಿ ಮುಖಂಡರು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಜನವರಿಯಿಂದ ಎಲ್ಲಾ ಪಕ್ಷಗಳಲ್ಲೂ ಪಕ್ಷಾಂತರ ಪರ್ವ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ. 2023ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಜನವರಿಯಿಂದ ಪಕ್ಷಾಂತರ ಪರ್ವ ಆರಂಭವಾಗಲಿದೆ. ರಾಜಕೀಯ ಅಂದ್ರೆ ಹೀಗೆ ಅಂತ ಹೇಳಲು ಆಗಲ್ಲ. ಇದೆಲ್ಲಾ ಆನ್ ಲೈನ್ ಬುಕ್ಕಿಂಗ್ ಇದ್ದ ಹಾಗೆ. ಯಾವಾಗ ಬೇಕಾದರೂ ಬುಕ್ ಮಾಡಬಹುದು. ಯಾವಾಗ ಬೇಕಾದರೇ ಕ್ಯಾನ್ಸಲ್ ಮಾಡಬಹುದು ಎಂದರು. ಇನ್ನು ಜನವರಿ, ಫೆಬ್ರವರಿಗೆ ಕಾಂಗ್ರೆಸ್ ಪ್ರಣಾಳಿಕೆ ಫೈನಲ್ ಆಗಲಿದೆ. ಮಳೆಗಾಲ ನಿಂತ ಮೇಲೆ ಎಲ್ಲಾ ಲೆಕ್ಕಾಚಾರ ಶುರುವಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. : - - - -- - .