ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಯೋಜನೆ ಕೈಬಿಟ್ಟ ವಿಚಾರ: ಸರ್ಕಾರದ ನಿರ್ಧಾರ ಸರಿ ಇದೆ ಎಂದ ರಾಜವಂಶಸ್ಥ ಯದುವೀರ್. ಮೈಸೂರು,ಜುಲೈ,8,2022(..):ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ಯೋಜನೆ ಜಿಲ್ಲಾಡಳಿತ ಕೈಬಿಟ್ಟ ವಿಚಾರ ಸಂಬಂಧ ಸರ್ಕಾರದ ನಿರ್ಧಾರ ಸರಿ ಇದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಇಂದು ಚಾಮುಂಡಿ ಬೆಟ್ಟದಲ್ಲಿ ಎರಡನೇ ಆಷಾಢ ಶುಕ್ರವಾರದ ಸಂಭ್ರಮವಾಗಿದ್ದು, ರಾಜವಂಶಸ್ಥ ಯದುವೀರ್ ಅವರು ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯ ಜೊತೆಗೆ ಚಾಮುಂಡಿ ಬೆಟ್ಟದ ಅಭಿವೃದ್ಧಿಯಾಗಬೇಕು.ಇದು ಪ್ರವಾಸಿ ತಾಣವಲ್ಲ, ಧಾರ್ಮಿಕ ಸ್ಥಳ. ಇದನ್ನ ಹಾಗೇಯೇ ಸರ್ಕಾರ ಕಾಪಾಡಿಕೊಳ್ಳಬೇಕು.ಈ ನಿಟ್ಟಿನಲ್ಲಿ ಸರ್ಕಾರದ ನಿರ್ಣಯಗಳು ಸರಿ ಇದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. : - -