ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬಳ್ಳಾರಿ ಬಂದ್: ವ್ಯಾಪಾರ ವಹಿವಾಟು ಸ್ಥಗಿತ. ಬಳ್ಳಾರಿ,ಜುಲೈ,4,2022(..):ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಕರ್ನಾಟಕದಲ್ಲೂ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆಕನ್ಹಯ್ಯಾರ ಭೀಕರ ಹತ್ಯೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆಗಳು ಇಂದು ಬಳ್ಳಾರಿ ಬಂದ್​​ ಗೆ ಕರೆ ನೀಡಿವೆ. ದೇಶಭಕ್ತಿ ನಾಗರಿಕ ವೇದಿಕೆ, ಹಿಂದೂ ಸಂಘಟನೆಗಳಿಂದ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು, ಈಗಾಗಲೇ ಪ್ರತಿಭಟನೆಗಳು ನಡೆಯುತ್ತಿವೆ. ಬಂದ್​ಗೆ ಥಿಯೇಟ್ ಮಾಲೀಕರು, ವ್ಯಾಪಾರಸ್ಥರು, ಆಟೋ ಚಾಲಕರು ಬೆಂಬl ಸೂಚಿಸಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಿದ್ದಾರೆ. ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಸಾವಿರಾರು ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿ ಬೈಕ್ ರ್ಯಾಲಿ ನಡೆಸುತ್ತಿದ್ದಾರೆ. ಬಂದ್​ ಕರೆಗೆ ಬೆಂಬಲ ಸೂಚಿಸುವಂತೆ ವ್ಯಾಪಾರ ವಹಿವಾಟು, ಸಿನಿ ಪ್ರದರ್ಶಕರು, ಆಟೋ ಚಾಲಕರು, ಬಸ್ ಮಾಲೀಕರು, ಲಾರಿ ಮಾಲೀಕರು, ಸೇರಿದಂತೆ ವಾಣಿಜ್ಯ ವಹಿವಾಟು, ಸಾರಿಗೆ ಸಂಪರ್ಕ ಸ್ಥಗಿತಕ್ಕೆ ಪ್ರತಿಭಟನಾಕಾರರು ಮನವಿ ಮಾಡಿದ್ದರು. ಅದರಂತೆ ಥಿಯೇಟ್ ಮಾಲೀಕರು, ವ್ಯಾಪಾರಸ್ಥರು, ಆಟೋ ಚಾಲಕರು ಸೂಚಿಸಿದ್ದಾರೆ. : – – –- .