ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಬಗ್ಗೆ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕೆ.ಎನ್ ರಾಜಣ್ಣ. ತುಮಕೂರು,ಜುಲೈ,1,2022(..):ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಕಾಂಗ್ರೆಸ್ ನ ಮಾಜಿ ಶಾಸಕ ಕೆಎನ್ ರಾಜಣ್ಣ ಇದೀಗ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೆ.ಎನ್ ರಾಜಣ್ಣ, ನನ್ನ ಹೇಳಿಕೆಯಿಂದ ಮನಸ್ಸಿಗೆ ನೋವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ. ಅವರ ಕುಟುಂಬಕ್ಕೆ ಅಭಿಮಾನಿಗಳಿಗೆ ಬೇಸರವಾಗಿದ್ದರೇ ವಿಷಾದಿಸುವೆ ಎಂದಿದ್ದಾರೆ. ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡಲಾಗುತ್ತಿದೆ. ತಳ ಸಮುದಾಯದಿಂದ ಬಂದಂತ ನನ್ನನ್ನು ಮುಗಿಸೋ ಷಡ್ಯಂತ್ರ ನಡೆಸಲಾಗುತ್ತಿದೆ. ನನಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಬಗ್ಗೆ ಅಪಾರ ಗೌರವವಿದೆ ಎಂದು ಕೆ.ಎನ್ ರಾಜಣ್ಣ ಹೇಳಿದ್ದಾರೆ. : – - - - .