ಚಾಮುಂಡೇಶ್ವರಿ ವರ್ಧಂತಿ ಹಾಗೂ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ವಾಹನಗಳ ಸಂಚಾರ ನಿರ್ಬಂಧ. ಮೈಸೂರು,ಜೂನ್,29,2022(..):ಚಾಮುಂಡೇಶ್ವರಿ ವರ್ಧಂತಿ ಹಾಗೂ ಆಷಾಢ ಶುಕ್ರವಾರದ ದಿನಗಳಂದು ವಾಹನ ಪಾರ್ಕಿಂಗ್, ಸಂಚಾರದ ಮೇಲೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಆದೇಶಿಸಿರುವ ಅವರು, ಮೈಸೂರು ನಗರದ ಚಾಮುಂಡಿಬೆಟ್ಟದಲ್ಲಿ ಆಷಾಡ ಶುಕ್ರವಾರದ ದಿನಗಳಂದು ಹಾಗೂ ಚಾಮುಂಡೇಶ್ವರಿ ವರ್ಧಂತಿ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ತಮ್ಮ ತಮ್ಮ ವಾಹನಗಳಲ್ಲಿ ಬರುವುದರಿಂದ ಚಾಮುಂಡಿಬೆಟ್ಟದಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶವಿಲ್ಲದೆ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತದೆ. ಇದನ್ನ ತಪ್ಪಿಸುವ ಹಾಗೂ ಸಾರ್ವಜನಿಕರ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಚಾಮುಂಡಿಬೆಟ್ಟಕ್ಕೆ ಬರುವ ವಾಹನಗಳ ಸಂಚಾರದ ಮೇಲೆ ನಿರ್ಬಂಧ ವಿಧಿಸುವುದು ಅತ್ಯಾವಶ್ಯಕವಾಗಿರುವುದರಿಂದ ದಿನಾಂಕ 01-07-2022, 08-07-2022. 15-07-2022 & 22.07.2022 ಆಷಾಢ ಶುಕ್ರವಾರಗಳಂದು ಹಾಗೂ ಶ್ರೀ ಚಾಮುಂಡೇಶ್ವರಿ ವರ್ಧಂತಿ ದಿನಾಂಕ: 20-07-2022 ರಂದು ಸಾರ್ವಜನಿಕರ ಹಿತದೃಷ್ಟಿಯಿಂದ ಹಿಂದಿನ ವರ್ಷಗಳಲ್ಲಿ ಕೈಗೊಂಡಿರುವ ಮಾರ್ಪಾಡುಗಳನ್ನು ಈ ವರ್ಷವೂ ಸಹ ಕಾರ್ಯಾನುಷ್ಠಾನಕ್ಕೆ ತರಲು ಚಾಮುಂಡಿಬೆಟ್ಟಕ್ಕೆ ತೆರಳುವ ವಾಹನಗಳ ಸಂಚಾರದ ಮೇಲೆ ನಿರ್ಬಂಧ ವಿಧಿಸಿ ಅಧಿಸೂಚನೆ ಹೊರಡಿಸಲು ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿದೆ. 5, ಉತ್ತನಹಳ್ಳಿ ರಸ್ತೆ ಕಡೆಯಿಂದ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತಾದಿಗಳು ನಂಜನಗೂಡು ರಸ್ತೆ ಮೂಲಕ ಎಂ.ಎಲ್.ಸೋಮಸುಂದರಂ ವೃತ್ತ- ಮಹಾರಾಣಾ ಪ್ರತಾಪ ಸಿಂಹ ವೃತ್ತ- ಸಂಗೊಳ್ಳಿ ರಾಯಣ್ಣ ವೃತ್ತ ಲಲಿತಮಹಲ್ ರಸ್ತೆ ಮೂಲಕ ಲಲಿತಮಹಲ್ ಮೈದಾನದ ಖಾಲಿ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು. : - – - –-