ಪಿಎಸ್ ಐ ನೇಮಕಾತಿ ಅಕ್ರಮ ಹಗರಣ: ಮರು ಪರೀಕ್ಷೆ ನಡೆಸದಂತೆ ಸಿಎಂ ಬೊಮ್ಮಾಯಿಗೆ ಮನವಿ. ಬೆಂಗಳೂರು,ಜೂನ್,30,2022(..): ಪಿಎಸ್ ಐ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮರುಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಲಾಗಿದೆ. ಪಿಎಸ್ ಐ ನೇಮಕಾತಿ ಮರುಪರೀಕ್ಷೆ ನಡೆಸದಂತೆ ಸಾಹಿತಿ ಬಿ.ಟಿ ಲಲಿತಾನಾಯಕ್, ಹೋರಾಟಗಾರ ವೆಂಕಟಸ್ವಾಮಿ ನೇತೃತ್ವದ ನಿಯೋಗ ಮನವಿ ಸಲ್ಲಿಸಿದೆ. ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಮರುಪರೀಕ್ಷೆ ನಡೆಸುವುದರಿಂದ ಕಳಂಕ ರಹಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಹಾಗಾಗಿ ಮರುಪರೀಕ್ಷೆ ಬೇಡ ಎಂದು ಮನವಿ ಮಾಡಿದ್ದಾರೆ. : - –- - –