ನಕಲಿ ಫೇಸ್ ಬುಕ್ ಖಾತೆ ತೆರೆದು ಅನುಚಿತ ಸಂದೇಶ: ನಟಿ ಪವಿತ್ರಾ ಲೋಕೇಶ್ ದೂರು. ಮೈಸೂರು,ಜೂನ್,29,2022(..):ಅಪರಿಚಿತ ವ್ಯಕ್ತಿಯೊಬ್ಬರು ನನ್ನ ಹೆಸರಿನಲ್ಲಿ ನಕಲಿ ಫೇಸ್ ​ಬುಕ್ ಖಾತೆ ತೆರೆದು, ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿ ನಜರಬಾದ್‌ ನ ಸೈಬರ್, ಮಾದಕ ದ್ರವ್ಯ ಮತ್ತು ಆರ್ಥಿಕ ಅಪರಾಧ ಠಾಣೆಗೆ ನಟಿ ಪವಿತ್ರ ಲೋಕೇಶ್ ದೂರು ನೀಡಿದ್ದಾರೆ. ‘ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದಲ್ಲದೇ, ಘನತೆಗೆ ಧಕ್ಕೆ ತರುವ ಸಂದೇಶವನ್ನು ಕಳುಹಿಸುವ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪವಿತ್ರ ಲೋಕೇಶ್ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಸೈಬರ್ ಅಪರಾಧ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. : - - - - - .