ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಇಡಿ ಸಮನ್ಸ್. ಮುಂಬೈ,ಜೂನ್,27,2022(..):ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ನಡುವೆಶಿವಸೇನಾ ನಾಯಕ, ಸಂಸದ ಸಂಜಯ್​ ರಾವತ್​ ಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದ್ದು ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿದೆ. ಪತ್ರಾ ಬಡಾವಣೆ ಅಭಿವೃದ್ಧಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯ ಸಂಜಯ್ ರಾವತ್ ​ಗೆ ಸಮನ್ಸ್​ ಜಾರಿ ಮಾಡಿರುವ ಇಡಿ, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ನ 47 ಎಕರೆ ಜಾಗಕ್ಕೆ ಸಂಬಂಧಿಸಿದಂತೆ ಉದ್ಯಮಿ ಪ್ರವೀಣ್​ ಜತೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಸಂಜಯ್​ ರಾವತ್​ ಮೇಲಿದೆ. ಭೂ ಅಭಿವೃದ್ಧಿ ಹಗರಣದಲ್ಲಿ ರಾವತ್​ಗೆ ಸಂಬಂಧಿಸಿದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಅತ್ತ ಮಹಾ ಆಘಾಡಿ ಸರ್ಕಾರಕ್ಕೆ ರೆಬಲ್​ ಶಾಸಕರು ಬೆಂಬಲ ಹಿಂಪಡೆದಿದ್ದು, ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರ ಪತನದತ್ತ ಸಾಗಿದೆ. ಈ ನಡುವೆ ಇಡಿ ಸಮನ್ಸ್​ ಜಾರಿ ಹಿನ್ನೆಲೆ ಸಂಜಯ್ ರಾವತ್ ಗೆ​ ಸಂಕಷ್ಟ ಎದುರಾಗಿದೆ. : - - - -