ಮೈಸೂರಿನಲ್ಲಿ ಭೀಕರ ಅಪಘಾತ: ದಂಪತಿಗೆ ಗಂಭೀರ ಗಾಯ ಮೈಸೂರು, ಜುಲೈ, 19,2024 (..):ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ದಂಪತಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ಇಂದು ನಡೆದಿದೆ. ಮೈಸೂರಿನ ಕೂರ್ಗಳ್ಳಿ ಬಳಿ ರಿಂಗ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಪತಿ ಚಂದ್ರ ಹಾಗೂ ಪತ್ನಿ ಪ್ರೇಮ ಗಂಭೀರ ಗಾಯಗೊಂಡವರು. ಬೈಕ್ ನಲ್ಲಿ ತೆರಳುತ್ತಿದ್ದ ಪತಿ ಚಂದ್ರು ಹಾಗೂ ಪತ್ನಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟಕಾ ಸ್ಥಳಕ್ಕೆ ವಿವಿ ಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. : , , ,