ಬಿಜೆಪಿ ನಾಯಕರ ವಿರುದ್ದ ಚುನಾವಣಾ ಬಾಂಡ್ ಕೇಸ್: ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್ ಬೆಂಗಳೂರು, ಸೆಪ್ಟೆಂಬರ್ 30,2024 (..):ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ​ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಆದರ್ಶ ಅಯ್ಯರ್ ಅವರು ಬೆಂಗಳೂರಿನ ತಿಲಕ್​ ನಗರ ಠಾಣೆಗೆ ದೂರು ದಾಖಲಿಸಿದ್ದರು. ಈ ಕುರಿತು ಎಫ್ ಐಆರ್ ದಾಖಲಾಗಿತ್ತು. ನಂತರ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ಪ್ರಕರಣ ರದ್ದು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇಂದು (ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಹೈಕೋರ್ಟ್ ಮುಂದೂಡಿಕೆ ಮಾಡಿದೆ. . ಮುಂದಿನ ವಿಚಾರಣೆವರೆಗೂ ತನಿಖೆ ನಡೆಸದಂತೆ ತಡೆ ನೀಡಿದೆ. ಈ ಮೂಲಕ ನಳೀನ್ ಕುಮಾರ್ ಕಟೀಲ್​ ಜೊತೆಗೆ ಇನ್ನಿತರರಿಗೂ ರಿಲೀಫ್ ಸಿಕ್ಕಂತಾಗಿದೆ. : , , , ,