ಪಕ್ಷದಿಂದ ಉಚ್ಛಾಟನೆ ಮಾಡಿದ್ದು ನನಗೆ ಸಂತೋಷ ತಂದಿದೆ- ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ತುಮಕೂರು,ಜೂನ್,23,2022(..):ಜೆಡಿಎಸ್ ವಿರುದ್ಧ ಬಂಡಾಯವೆದ್ದು ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಮತ್ತು ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರನ್ನು ಉಚ್ಚಾಟನೆ ಮಾಡಿಜೆಡಿಎಸ್ಆದೇಶ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗುಬ್ಬಿ ಜೆಡಿಎಸ್ ಶಾಸಕ ಎಸ್ಆರ್ ಶ್ರೀನಿವಾಸ್ ಜೆಡಿಎಸ್ ಉಚ್ಚಾಟನೆ ಮಾಡಿರುವುದರಲ್ಲಿ ಹೊಸದೇನಿಲ್ಲ. ಪಕ್ಷದಿಂದ ಉಚ್ಚಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ ಎಂದಿದ್ದಾರೆ. ಅಲ್ಲದೆ ಈ ಬೆಳವಣಿಗೆ ಮುಜುಗರ, ಅವಮಾನ ಎಂದು ಅನಿಸಲ್ಲ. ನನ್ನ ವಿರುದ್ಧ ಅಭ್ಯರ್ಥಿ ಘೋಷಿಸಿದಾಗಲೇ ನಾನು ಉಚ್ಚಾಟಿತನಾಗಿದ್ದೆ. ಡಿಸೆಂಬರ್ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. : ----