ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕೆ.. ಹಾಸನ,ಜೂನ್,22,2022(..):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಠ್ಯ ಪರಿಷ್ಕರಣೆ ಬಗ್ಗೆ ಹೆಚ್.ಡಿ ದೇವೇಗೌಡರು ಪತ್ರ ಬರೆದಿದ್ದರು. ಈ ಬಗ್ಗೆ ಸಭೆ ನಡೆಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಎಲ್ಲವೂ ಕೇಶವಕೃಪಾದಲ್ಲಿ ತೀರ್ಮಾನವಾಗುತ್ತದೆ. ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ. ಅವರನ್ನ ನೋಡಿದರೇ ನನಗೆ ಕನಿಕರ ಬರುತ್ತೆ ಎಂದು ಟೀಖಿಸಿದರು. ಈ ಹಿಂದೆ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಸರ್ಕಾರದ ವೇಳೆ ರಾಜ್ಯಕ್ಕೆ ಆಗಮಿಸಿದ್ಧ ಪ್ರಧಾನಿ ನರೇಂದ್ರ ಮೋದಿ ಅಂದು ಕರ್ನಾಟಕದ ಮುಖ್ಯಮಂತ್ರಿಯಾಗಿದ್ಧ ಹೆಚ್.ಡಿ ಕುಮಾರಸ್ವಾಮಿ ಅವರನ್ನ ರಿಮೋಟ್ ಕಂಟ್ರೋಲ್ ಸಿಎಂ ಎಂದು ಲೇವಡಿ ಮಾಡಿದ್ದರು. : - -- -