ಪ್ರಧಾನಿ ಮೋದಿ ರಾಜ್ಯ ಪ್ರವಾಸ ಟೀಕಿಸಿದ್ಧ ಸಿದ್ಧರಾಮಯ್ಯಗೆ ನಳೀನ್ ಕುಮಾರ್ ಕಟೀಲ್ ತಿರುಗೇಟು. ಬೆಂಗಳೂರು,ಜೂನ್,21,2022(..):ಕೋವಿಡ್ ಸಂದರ್ಭದಲ್ಲಿ ರಾಜ್ಯದ ಜನರಿಗೆ ಆಕ್ಸಿಜನ್ ನೀಡಲು ಸಾಧ್ಯವಾಗದ ಪ್ರಧಾನಿ ಮೋದಿ ಈಗ ಯೋಗ ಮಾಡಲು ಬಂದಿದ್ದಾರೆ ಎಂದು ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಎಲ್ಲರ ಬಗ್ಗೆ ಅಸಡ್ಡೆಯಾಗಿ ಮಾತನಾಡುತ್ತಾರೆ. ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಈ ಹಿಂದೆ ಮಲೇರಿಯಾ ಸೇರಿ ಹಲವು ರೋಗ ಹರಡಿದ್ದವು. ಆಗ ಅಂದಿನ ಕಾಂಗ್ರೆಸ್ ಸರ್ಕಾರ ಆಸ್ಪತ್ರೆಗಳಲ್ಲಿ ಆಕ್ಸಿಜನ್ ನೀಡಿರಲಿಲ್ಲ. ಜನರಿಗೆ ಯಾವುದೇ ಸೌಲಭ್ಯಗಳನ್ನು ಕೊಟ್ಟಿರಲಿಲ್ಲ. ಇಂದು ನಾವು ಆಸ್ಪತ್ರೆಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದೇವೆ. ಸಿದ್ದರಾಮಯ್ಯ ಬಿಜೆಪಿಯನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೊರೊನಾದಂತಹ ಸಂಕಷ್ಟದ ಸಂದರ್ಭವನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಇಡೀ ದೇಶ ಸಮರ್ಥವಾಗಿ ಎದುರಿಸಿದೆ ಎಂದು ಟಾಂಗ್ ನೀಡಿದರು. : --- - -