‘’ ಹ್ಯಾಷ್ ಟ್ಯಾಗ್ ಬಳಸಿ ಪ್ರಧಾನಿ ಮೋದಿಗೆ ನಾಲ್ಕು ಪ್ರಶ್ನೆಗಳನ್ನ ಕೇಳಿದ ಮಾಜಿ ಸಿಎಂ ಸಿದ್ಧರಾಮಯ್ಯ. ಬೆಂಗಳೂರು,ಜೂನ್,20,2022(..):ವಿಶ್ವ ಯೋಗ ದಿನಾಚಾರಣೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ‍್ಧರಾಮಯ್ಯ ನಾಲ್ಕು ಪ್ರಶ್ನೆಗಳನ್ನ ಕೇಳಿದ್ದಾರೆ. ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನಕ್ಕೂ ಮುನ್ನ , ‘’ ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ದೇಶದ ರೈತರ ಪ್ರತಿರೋಧಕ್ಕೆ ಮಣಿದು ಕರಾಳ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಲಾಗಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಇಲ್ಲಿಯವರೆಗೂ ಕಾಯ್ದೆ ರದ್ದು ಮಾಡಿಲ್ಲ. ಇದು ನಿಮ್ಮ ಸೂಚನೆಯಂತೆ ನಡೆದಿದೆಯಾ? ಅಥವಾ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯೋ? ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಇದರ ಜೊತೆಗೆ ಮೇಕೆದಾಟು ಯೋಜನೆಗೆ ಅನುಮತಿ ನೀಡಲು ವಿಳಂಬ ಮಾಡುತ್ತಿರುವುದು ಯಾಕೆ? ಇದಕ್ಕೆ ಕಾರಣ ತಮಿಳುನಾಡು ಸರ್ಕಾರದ ಒತ್ತಡವೇ? ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ ಪೂರ್ವಾಗ್ರಹವೇ? ಎಂದು ಸಿದ್ಧರಾಮಯ್ಯ ಚಾಟಿ ಬೀಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಹಿಂದಿ ಹೇರಲು ಹೊರಟಿದ್ದಾರೆ. ರಾಜ್ಯಗಳ ಮೇಲೆ ಒತ್ತಾಯಪೂರ್ವಕವಾಗಿ ಹೇರಲು ಯತ್ನಿಸುತ್ತಿದ್ದಾರೆ. ಮೋದಿ ಅವರೇ, ಕನ್ನಡದ ಅಸ್ಮಿತೆ ಬಗ್ಗೆ ನಿಮ್ಮ ನಿಲುವೇನು? ನಿಮ್ಮ ಮೌನ ಅಮಿತ್ ಶಾ ಅವರ ಹೇಳಿಕೆಗೆ ಸಹಮತವೋ? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಜನತೆಯ ಬಹುಕಾಲದ ಬೇಡಿಕೆಯಾದ ಬೆಂಗಳೂರು ಉಪನಗರ ರೈಲು ಯೋಜನೆ ನೆನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವಲ್ಲವೆ? ಈ ಯೋಜನೆಯ ಚಾಲನೆ ಇಷ್ಟೊಂದು ವಿಳಂಬವಾಗಲು ಕೇಂದ್ರ ಸರ್ಕಾರವೇ ಹೊಣೆಯಲ್ಲವೆ? ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. : –- - - - . … 4 ‘’, 20, 2022 (..): - . ‘ ’ . , . , . . , . . ? - .? ? ? . ? . , ? ’ ? . , ?,” ’ .: / /