ಕಾಂಗ್ರೆಸ್ ನ ರಾಜಭವನ ಚಲೋಗೆ ತಡೆ: ಡಿಕೆಶಿ, ಸಿದ್ಧರಾಮಯ್ಯರನ್ನ ವಶಕ್ಕೆ ಪಡೆದ ಪೊಲೀಸರು. ಬೆಂಗಳೂರು,ಜೂನ್,16,2022(..):ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ಇಂದು ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿದ್ಧ ರಾಜಭವನ ಚಲೋವನ್ನ ಪೊಲೀಸರು ತಡೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ , ವಿಪಕ್ಷ ನಾಯಕ ಸಿದ್ಧರಾಮಯ್ಯ ನೃತೃತ್ವದಲ್ಲಿ ಇಂದು ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನ ಕ್ವೀನ್ಸ್ ರಸ್ತೆಯಲ್ಲಿ ಪೊಲೀಸರು ತಡೆದರು. ಈ ವೇಳೆ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆಗೆ ಮುಂದಾದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಿದ್ಧರಾಮಯ್ಯ, ಡಿಕೆಶಿವಕುಮಾರ್, ಶಾಸಕ ಯತೀಂದ್ರ ಸಿದ್ಧರಾಮಯ್ಯ ಸೇರಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. : – -- - . … : , 16, 2022 (..): , ’ . .. ’ . . . , .. , , .: / /