ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ: ಸುರ್ಜೇವಾಲಾ ಶ್ರೀನಿವಾಸ್ ಸೇರಿ ಹಲವರು ವಶಕ್ಕೆ. ನವದೆಹಲಿ,ಜೂನ್,13,2022(..):ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದು ಮೂವರು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ನವದೆಹಲಿಯ ಇಡಿ ಕಚೇರಿ ಎದುರು ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಹೈಡ್ರಾಮಾವೇ ನಡೆದಿದೆ. ಪ್ರತಿಭಟನೆಗೆ ಮುಂದಾಗಿ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಸೇರಿ ಹಲವು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾಲ್ ಬಾಗ್ ಗೇಟ್ ನಿಂದ ಇಡಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ಆಗಮಿಸಿ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ನಾಯಕರು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ಇನ್ನು ನೂಕಾಟ ತಳ್ಳಾಟದ ವೇಳೆ ಕೈ ಮುಖಂಡ ವೇಣುಗೋಪಾಲ್ ಅಸ್ವಸ್ಥರಾದ ಘಟನೆ ನಡೆಯಿತು. : --- - - …. . ’ , 13, 2022 (..): . . () , . , . .: / / /