ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್, ಜೆಡಿಎಸ್ ಅಭ್ಯರ್ಥಿ ಎಚ್.ಕೆ.ರಾಮು ವಿರುದ್ಧ ಎಫ್’ಐಆರ್ ಬೆಂಗಳೂರು,ಜೂನ್12, 2022 (..):ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮೈ. ವಿ. ರವಿಶಂಕರ್ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್. ಕೆ. ರಾಮು ವಿರುದ್ಧ ಎಫ್ ಐಆರ್ ದಾಖಲಾಗಿದೆ. ಅನುಮತಿ ಪಡೆಯದೇ ಜಾಹೀರಾತು, ಪಕ್ಷದ ಚಿಹ್ನೆಯೊಟ್ಡಿಗೆ ಮತದಾರರ ಪಟ್ಟಿಯನ್ನು ವೆಬ್ ಸೈಟಿನಲ್ಲಿ ಅಪ್ ಲೋಡ್ ಮಾಡಿದ ಇಬ್ಬರು ಅಭ್ಯರ್ಥಿಗಳ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಐಪಿಸಿ 171(ಸಿ) ಅಡಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಸೇನ್ ಗುಡೂರ್ ಪ್ರಕರಣ ದಾಖಲಿಸಿದ್ದಾರೆ. ಮಾಧ್ಯಮ ಸರ್ಟಿಫಿಕೇಷನ್ ಹಾಗೂ ಮಾನಿಟರಿಂಗ್ ಕಮಿಟಿಯಿಂದ ಯಾವುದೇ ಅನುಮತಿ ಪಡೆಯದೇ ಪಕ್ಷದ ಚಿಹ್ನೆಯಡಿ ಮತದಾರರ ಪಟ್ಟಿ ಅಪ್ ಲೋಡ್ ಮಾಡಿದ್ದು ಹಾಗೂ ಜಾಹೀರಾತು ನೀಡಿದ್ದರಿಂದ ಈ ಪ್ರಕರಣ ದಾಖಲಾಗಿದೆ.