ಜೂನ್ 13 ರಂದು ವಿಧಾನ ಪರಿಷತ್ ಚುನಾವಣೆ: ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ. ಬೆಂಗಳೂರು,ಜೂನ್,10,2022(..):ಜೂನ್ 13 ರಂದು ರಾಜ್ಯದಲ್ಲಿ ವಿಧಾನಪರಿಷತ್ ನ ಪದವೀಧರ ಹಾಗು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಮತದಾರ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರದ ಅಧೀನ ಕಾರ್ಯದರ್ಶಿ ಅಪೇಕ್ಷಾ ಸತೀಶ್ ಪವಾರ್, ಎಲ್ಲಾ ಸರ್ಕಾರಿ ಹಾಗೂ ಶಾಲಾ ಕಾಲೇಜು, ಅನುದಾನ ಹಾಗೂ ಅನುದಾನ ರಹಿತ, ಸಹಿತ ಶಿಕ್ಷಣ ಸಂಸ್ಥೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕ್ ಗಳಿಗೆ ಇತರ ಸಂಸ್ಥೆಗಳ ಪದವೀಧರ ಮತದಾರಿಗೆ ಸಾಂದರ್ಭಿಕ ರಜೆ ನೀಡುವಂತೆ ಸೂಚಿಸಿದ್ದಾರೆ. ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದ್ದು ಅಂದು ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿದೆ. ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ವಾಯುವ್ಯ ಪದವೀಧರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ವ್ಯಾಪ್ತಿಯಲ್ಲಿ ಚುನಾವಣೆ ನಡೆಯಲಿದೆ. : -- 13- –- – . … 13: . , 10, 2022 (..): 13, , ’ , ’ . , , , . , . 13. ’ , , , , ’ . ’ , , , ’ , , .: / / / 13