ಮದುವೆಗೆ ಒಪ್ಪದ ಮಹಿಳೆಯ ಮೇಲೆ ಆ್ಯಸಿಡ್ ದಾಳಿ. ಬೆಂಗಳೂರು,ಜೂನ್,10,2022(..):ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದ ಪ್ರಕರಣ ಮಾಸುವ ಮುನ್ನವೆ ಇದೀಗ ಅಂತಹದೊಂದು ಘಟನೆ ಮತ್ತೆ ನಡೆದಿದೆ. ಹೌದು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆ ಮೇಲೆ ಪರಿಚಯಸ್ಥನೇ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಇಂದು ನಡೆದಿದೆ. ನಗರದ ಸಾರಕ್ಕಿ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ಆಹ್ಮದ್ ಎಂಬಾತನೇ ಆ್ಯಸಿಡ್ ದಾಳಿ ನಡೆಸಿದ ಆರೋಪಿ. ಅಹ್ಮದ್​ ವಿವಾಹಿತ ಮಹಿಳೆಯನ್ನ ಪ್ರೀತಿಸುತ್ತಿದ್ದ. ತನ್ನನ್ನು ಮದುವೆಯಾಗುವಂತೆ ದುಂಬಾಲು ಬಿದ್ದಿದ್ದ. ಈ ವೇಳೆ ಮದುವೆಯಾಗಲು ಒಪ್ಪದಿದ್ದಾಗ ಮಹಿಳೆ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಆ್ಯಸಿಡ್ ದಾಳಿಯಿಂದ ಮಹಿಳೆ ಬಲಗಣ್ಣಿಗೆ ಗಂಭೀರ ಗಾಯವಾಗಿದ್ದು, ಗಾಯಾಳು ಮಹಿಳೆಯನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕುಮಾರಸ್ವಾಮಿ ಲೇ ಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - – -