ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕೇಂದ್ರ ಸಚಿವ ನಿತಿನ್ ಗಡ್ಕರಿ. ಮೈಸೂರು,ಜೂನ್,9,2022(..):ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಠದ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದ ಕೇಂದ್ರ ಸಚಿವ ನಿತಿನ್ ಗಡ್ಕರಿ‌, ಸುತ್ತೂರು ಶ್ರೀಗಳ ಜೊತೆ ಉಭಯ ಕುಶಲೋಪರಿ ವಿಚಾರಿಸಿದರು. ನಿತಿನ್ ಗಡ್ಕರಿ ಅವರ ಜೊತೆ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ‍ಉಪಸ್ಥಿತರಿದ್ದರು. : - -- -