ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ. ಬೆಂಗಳೂರು,ಜೂನ್,7,2022(..):ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)​ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ತಾಲಿಕ್ ಎಂದು ಹೆಸರು ಬದಲಿಸಿ ಓಡಾಡ್ತಿದ್ದ ಉಗ್ರ ತಾಲಿಬ್, ಓಕಳಿಪುರಂ ಮಸೀದಿ ಬಳಿ ವಾಸವಿದ್ದ. ಈತ ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಮತ್ತು ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು. ಕಳೆದ 8 ವರ್ಷದಿಂದ ವಾಸವಿದ್ದ ಶಂಕಿತ ಉಗ್ರ ತಾಲಿಬ್ ಅಲ್ಲಿನ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದೆ. ಸದ್ಯ ಉಗ್ರ ತಾಲಿಬ್ ​ನನ್ನು ಪೊಲೀಸರು ಬಂಧಿಸಿ ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ. : – –- .