ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯಿಂದ ಮತ್ತೊಂದು ಯಡವಟ್ಟು…? ಬೆಂಗಳೂರು,ಜೂನ್,3,2022(..):ರಾಜ್ಯದಲ್ಲಿ ಪಠ್ಯಪುಸಕ್ತ ಪರಿಷ್ಕರಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಇದೀಗ ಪಠ್ಯ ಪರಿಶೀಲನಾ ಸಮಿತಿಯಿಂದ ಮತ್ತೊಂದು ಎಡವಟ್ಟು ಬಹಿರಂಗವಾಗಿದೆ. ಹೌದು, 3 ಮತ್ತು 4ನೇ ತರಗತಿ ಪುಸ್ತಕಗಳಲ್ಲಿ ಒಂದೇ ಪದ್ಯವನ್ನು ಸೇರ್ಪಡೆಗೊಳಿಸಲಾಗಿದೆ ಎನ್ನಲಾಗಿದೆ, ಬಿ.ಎಂ ಶರ್ಮಾರವರು ‘ಬಾವಿಯಲ್ಲಿ ಚಂದ್ರ’ ಎಂಬ ಪದ್ಯವನ್ನು 3 ಮತ್ತು 4ನೇ ತರಗತಿ ಪುಸ್ತಕದಲ್ಲಿ ಸೇರ್ಪಡೆ ಮಾಡಲಾಗಿದೆ. ಈ ಮೂಲಕ ಎರಡು ತರಗತಿಗಳಲ್ಲಿ ಸೇರಿಸಿ ಸಮಿತಿ ಎಡವಟ್ಟು ಮಾಡಿದೆ ಎನ್ನಲಾಗಿದೆ. ಬಾವಿಯಲ್ಲಿ ಚಂದ್ರ ಶೀರ್ಷಿಕೆಯ ಪದ್ಯವನ್ನು ಹಿಂದಿನ ಸಮಿತಿಯು 3ನೇ ತರಗತಿ ನಲಿ-ಕಲಿ ಕನ್ನಡ ಪಠ್ಯದಲ್ಲಿ ಸೇರಿಸಿತ್ತು. ರೋಹಿತ್ ಚಕ್ರತೀರ್ಥ ಸಮಿತಿಯು 3ನೇ ತರಗತಿಯ ನಲಿಕಲಿ ಕನ್ನಡ ಪಠ್ಯದಲ್ಲಿ ಮುಂದುವರೆಸಿದೆ. ಅಲ್ಲದೆ 4ನೇ ತರಗತಿಯ ಸವಿ ಕನ್ನಡ ಪುಸ್ತಕದಲ್ಲಿಯೂ ಇದೇ ಪದ್ಯ ಸೇರಿಸಲಾಗಿದ್ದು, ಪಾಠ ಮಾಡುವ ಶಿಕ್ಷಕರಿಗೂ ಗೊಂದಲ ಉಂಟಾಗಿದೆ ಎಂದು ಹೇಳಲಾಗುತ್ತಿದೆ. : – - - ---