ಪತ್ರಕರ್ತರ ಸೋಗಿನಲ್ಲಿ ಬಂದು ಹಲ್ಲೆ: ಕಿಡಿಗೇಡಿಗಳ ವಿರುದ್ಧ ಕಠಿಣ ಶಿಕ್ಷೆಯಾಗಬೇಕು- ರಾಕೇಶ್ ಟಿಕಾಯತ್ ಆಗ್ರಹ. ಬೆಂಗಳೂರು,ಮೇ,30,2022(..):ಪತ್ರಿಕಾಗೋಷ್ಠಿ ವೇಳೆ ತಮ್ಮ ಮೇಲೆ ಮಸಿ ಎರಚಿ ಹಲ್ಲೆಗೆ ಮುಂದಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೈತನಾಯಕ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ಗಾಂಧಿಭವನದಲ್ಲಿ ಮಸಿ ಎರಚಿ ಹಲ್ಲೆ ನಡೆಸಿದ ಬೆನ್ನಲ್ಲೆ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ರಾಕೇಶ್ ಟಿಕಾಯತ್, ಪತ್ರಕರ್ತರ ಸೋಗಿನಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಕಿಡಿಗೇಡಿಗಳು ನಮ್ಮನ್ನ ಟಾರ್ಗೆಟ್ ಮಾಡಿದ್ದಾರೆ.ನೇರಗುರಿ ನಾವೇ. ಎಲ್ಲರಿಗೂ ತಮ್ಮ ವಿಚಾರ ಹೇಳುವ ಅಧಿಕಾರ ಇದೆ. ಹಲ್ಲೆ ಮಾಡಿದವರಿಗೆ ಮುಲಾಜಿಲ್ಲದೇ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ರಾಕೇಶ್ ಟಿಕಾಯತ್ ಗೆ ಮಸಿ ಬಳಿದ ಘಟನೆ ಖಂಡಿಸಿ ನಾಳೆ ಕಪ್ಪುಪಟ್ಟಿ ಧರಿಸಿ ರಾಜ್ಯಾದ್ಯಂತ ಪ್ರತಿಭಟನೆ ನಿರ್ಧರಿಸಲಾಗಿದೆ. ಇನ್ನು ಘಟನೆ ಸಂಬಂಧ ಭರತ್ ಶೆಟ್ಟಿ ಸೇರಿ ಮೂವರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಹೈಗ್ರೌಂಡ್ಸ್ ಪೊಲೀಶ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. : – -