ರೈತಮುಖಂಡ ರಾಕೇಶ್ ಟಿಕಾಯತ್ ಗೆ ಕಪ್ಪು ಮಸಿ ಎರಚಿ, ಹಲ್ಲೆಗೆ ಯತ್ನ… ಬೆಂಗಳೂರು,ಮೇ,30,2022(..):ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಬೆಂಗಳೂರಿನಲ್ಲಿ ಕಿಡಿಗೇಡಿಗಳು ಕಪ್ಪು ಮಸಿ ಎರಚಿ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತ ಚಳವಳಿ ಬಗ್ಗೆ ಆತ್ಮಾವಲೋಕನದ ಸ್ಪಷ್ಟೀಕರಣ ಸಭೆಯಲ್ಲಿ ಈ ಘಟನೆ ನಡೆದಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರೈತನಾಯಕ ರಾಕೇಶ್ ಟಿಕಾಯತ್, ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ರಾಜ್ಯದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಕೆಲ ಕಿಡಿಗೇಡಿಗಳು ವಾಗ್ವಾದ ನಡೆಸಿ ರಾಕೇಶ್ ಟಿಕಾಯತ್ ಮತ್ತು ಯಧುವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಕೇಳಿ ಬರುತ್ತಿರುವ ಆರೋಪ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಲು ರಾಷ್ಟ್ರೀಯ ನಾಯಕರು ಬಂದಿದ್ದರು. ಮಸಿ ಎರಚಿ ಹಲ್ಲೆಗೆ ಮುಂದಾಗಿದ್ದವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ, ವಿಚಾರಣೆ ಬಳಿಕ ಮಾಹಿತಿ ತಿಳಿದುಬರಲಿದೆ. : - - - …. , 30, 2022 (..): , ’ . - ’ , . . ’ ’ . , ’ , . . .: / / /