ಪಿಎಸ್ ಐ ಮರುಪರೀಕ್ಷೆ ಆದೇಶ ವಾಪಸ್ ಗೆ ಆಗ್ರಹಿಸಿ ಪ್ರತಿಭಟನೆ: ಸಿಎಂ ಬೊಮ್ಮಾಯಿ ಭೇಟಿ. ಬೆಂಗಳೂರು,ಮೇ,28,2022(..):545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುಪರೀಕ್ಷೆ ಆದೇಶ ವಾಪಸ್ ಗೆ ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ನಗರದ ಪ್ರೀಡಂ ಪಾರ್ಕ್ ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, ಪಿಎಸ್ ಐ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯುವವರೆಗೂ ಯಾವುದೇ ಭರವಸೆ ನೀಡಲಾಗಲ್ಲ ತನಿಖೆ ಮುಗಿರುಯವವರ ತಾಳ್ಮೆಯಿಂದ ವರ್ತಿಸಬೇಕು. ನೀವು ನೀಡಿದ ಮನವಿ ಪತ್ರ ಪರಿಶೀಲನೆ ನಡೆಸುತ್ತೇನೆ ಎಂದರು. : --- -