ಬೆಳ್ಳಂಬೆಳಿಗ್ಗೆ ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ. ಬೆಂಗಳೂರು,ಮೇ,28,2022(..):ಬೆಳ್ಳಂಬೆಳಿಗ್ಗೆ ಉದ್ಯಮಿ, ಕಾಂಗ್ರೆಸ್ ಮುಖಂಡ ಕೆಜಿಎಫ್ ಬಾಬು ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸಿದ್ದಾರೆ. ಶನಿವಾರ ಬೆಳಗ್ಗೆ ನಾಲ್ಕು ಇನೋವಾ ಕಾರಿನಲ್ಲಿ ಬಂದ ಐಟಿ ಅಧಿಕಾರಿಗಳು ವಸಂತನಗರದಲ್ಲಿರುವ ಕೆಜಿಎಫ್​ ಬಾಬು ಒಡೆತನದ ರುಕ್ಸಾನ ಪ್ಯಾಲೇಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕೆಜಿಎಫ್ ಬಾಬು ಸ್ಪರ್ಧಿಸಿ ಪರಾಭವಗೊಂಡಿದ್ದರು. ಈ ನಡುವೆ 2023 ರ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ಕೆಜಿಎಫ್ ಬಾಬು ಸಿದ್ದತೆ ನಡೆಸಿದ್ದರು ಎನ್ನಲಾಗಿದೆ. : – – - -