ಜೂನ್ ಮೂರನೇ ವಾರದ ವೇಳೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಬೆಂಗಳೂರು, ಮೇ 27, 2022 (..):ದ್ವಿತೀಯ ಪಿಯುಸಿ ಫಲಿತಾಂಶ ಜೂನ್ ಮೂರನೇ ವಾರದ ವೇಳೆಗೆ ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಕರ್ನಾಟಕ ಪಿಯುಸಿ 2 ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು,ಮುಂದಿನ ವಾರ ಮೌಲ್ಯಮಾಪನ ಆರಂಭವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಯಾವುದೇ ಲೋಪ ಹಾಗೂ ಸಮಸ್ಯೆ ಎದುರಾಗದಂತೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.