ಭಾರಿ ಮಳೆ ಹಿನ್ನೆಲೆ: ಹಾಸನ ಜಿಲ್ಲೆಯಲ್ಲಿ ಶಾಲೆಗಳಿಗೆ ನಾಳೆ ರಜೆ ಘೋಷಣೆ ಹಾಸನ,ಜುಲೈ,15,2024 (..):ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಡಿಡಿಪಿಐ ಹೆಚ್.ಕೆ ಪಾಂಡು ಅವರು ಆದೇಶ ಹೊರಡಿಸಿದ್ದು, ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಹಾಸನ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. ನಾಳೆ ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಇಲಾಖೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಾಳಿನ ರಜೆಯನ್ನ 20 -7-2024 ಶನಿವಾರದಂದು ಸರಿದೂಗಿಸಿಕೊಳ್ಳಲು ಸೂಚಿಸಿದ್ದಾರೆ. : , , ,