ರಾಷ್ಟ್ರಕವಿ ಕುವೆಂಪುಗೆ ಅಪಮಾನ ಆರೋಪ ತಳ್ಳಿ ಹಾಕಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್. ಬೆಂಗಳೂರು,ಮೇ,23,2022(..):4ನೇ ತರಗತಿ ಪಠ್ಯ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಶಿಕ್ಷಣ ಇಲಾಖೆ ಅಪಮಾನ ಮಾಡಿದ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ 4ನೇ ತರಗತಿ ಪರಿಸರ ಅಧ್ಯಯನ ಪಠ್ಯ ಪರಿಷ್ಕರಣೆ ಮಾಡಿಲ್ಲ. ಆದರೆ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಕುವೆಂಪು ಬಗ್ಗೆ ಎಷ್ಟು ಪಠ್ಯ ಸೇರಿಸಿದ್ದೇವೆ ನೋಡಲಿ. ನಾವು ಕುವೆಂಪು ಬಗ್ಗೆ ಹೆಚ್ಚು ಪಠ್ಯ ಸೇರಿಸಿದ್ದೇವೆ. ಶಿಕ್ಷಣ ಇಲಾಖೆ ಕುವೆಂಪು ಅವರಿಗೆ ಅಪಮಾನ ಮಾಡಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ನೀಡಿದರು. : - -