ದಿಢೀರ್ ದೆಹಲಿಗೆ ತೆರಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ಬೆಂಗಳೂರು,ಮೇ,23,2022(..):ರಾಜ್ಯಸಭೆ ಮತ್ತು ವಿಧಾನ ಪರಿಷತ್ ಗೆ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ನಡುವೆ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ನಿನ್ನೆ ರತ್ರಿ 11.30ರ ವಿಮಾನದಲ್ಲಿ ಡಿ.ಕೆ ಶಿವಕುಮಾರ್ ಧಿಡೀರ್ ಆಗಿ ದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಲಾಬಿ ಮುಂದುವರೆದಿದ್ದು, 2 ಸ್ಥಾನಕ್ಕೆ ಹತ್ತಾರು ಆಕಾಂಕ್ಷಿಗಳ ಲಾಬಿ ಜೋರಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. : -- –