ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ರಚನೆ: ಸಂಸದ ಪ್ರತಾಪ್ ಸಿಂಹ ಟೀಕೆ ಬೆಂಗಳೂರು, ಮೇ 15, 2022 (..):ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ರಚನೆಯಾಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದರು. ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲಿಬಾನ್ ಸರ್ಕಾರ ರಚನೆಯಾಗುತ್ತೆ. ಕಾಂಗ್ರೆಸ್ ನಲ್ಲಿ ಇಂದು ಎರಡು ಟೀಂ ಗಳಿವೆ. ಒಂದು ಸಿದ್ದರಾಮಯ್ಯ ಟೀಂ, ಇನ್ನೊಂದು ಡಿ.ಕೆ.ಶಿ ಟೀಂ ಎಂದು ವ್ಯಂಗ್ಯವಾಡಿದರು. ಗೋರಿಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್. ಡಿ.ಕೆ.ಶಿವಕುಮಾರ್ ಟೀಂ ನ ವೈಸ್ ಕ್ಯಾಪ್ಟನ್ ನಲಪಾಡ್ ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ರಾಜ್ಯದ ಜನತೆ ಇಂದಿನಿಂದಲೇ ಎಚ್ಚೆತ್ತುಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಬೇಕು ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು ಎಂದು ಹೇಳಿದರು.