ಇಂದಿನಿಂದ ಶಾಲೆಗಳು ಆರಂಭ: ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣ- ಸಿಎಂ ಬೊಮ್ಮಾಯಿ. ಬೆಂಗಳೂರು,ಮೇ16,2022(..):ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗುತ್ತಿದ್ದು ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣೆ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗುತ್ತಿದೆ. ಬಹಳ ದಿನಗಳ ನಂತರ ಶಾಲೆ ಆರಂಭವಾಗುತ್ತಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಶಿಕ್ಷಣ ಬಹಳ ಮುಖ್ಯ. ಮಕ್ಕಳಿಗೆ ಪುಸ್ತಕ, ಬಟ್ಟೆ ಎಲ್ಲವನ್ನು ಕೊಡುತ್ತೇವೆ. ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸುತ್ತೇವೆ ಎಂದರು. : -- ---- .